Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:16
12 ತಿಳಿವುಗಳ ಹೋಲಿಕೆ  

ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿವಿುತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.


ನಾನು ಒಬ್ಬೊಂಟಿಗನೂ ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.


ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವದು.


ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.


ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು