Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:2 - ಕನ್ನಡ ಸತ್ಯವೇದವು J.V. (BSI)

2 ಆಳವಾದ ಕಳ್ಳುಸುಬಿನಲ್ಲಿ ಮುಳುಗುತ್ತಿದ್ದೇನೆ; ನೆಲೆ ಸಿಕ್ಕುವದಿಲ್ಲ. ದೊಡ್ಡ ಮಡುವಿನೊಳಕ್ಕೆ ಬಂದಿದ್ದೇನೆ; ಪ್ರವಾಹವು ನನ್ನನ್ನು ಬಡಕೊಂಡು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ. ನಾನು ಆಳವಾದ ನೀರಿನಲ್ಲಿದ್ದೇನೆ. ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:2
11 ತಿಳಿವುಗಳ ಹೋಲಿಕೆ  

ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ.


ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತವಿುತ್ರರು ನಿನ್ನ ಕಾಲುಗಳು ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.


ಇದಲ್ಲದೆ ಮುಂಗಾಣದ ಕತ್ತಲೂ ಜಲಪ್ರವಾಹವೂ ನಿನ್ನನ್ನು ಆವರಿಸಿರುತ್ತವೆ.


ಪರ್ವತಗಳ ಬುಡದ ತನಕ ಇಳಿದೆನು, ಭೂಲೋಕದ ಅಗುಳಿಗಳು ಎಂದಿಗೂ ತೆಗೆಯದ ಹಾಗೆ ನನ್ನ ಹಿಂದೆ ಹಾಕಲ್ಪಟ್ಟವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿಂದ ಉದ್ಧರಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು