Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:21 - ಕನ್ನಡ ಸತ್ಯವೇದವು J.V. (BSI)

21 ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:21
13 ತಿಳಿವುಗಳ ಹೋಲಿಕೆ  

ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.


ಸಿಪಾಯಿಗಳೂ ಆತನನ್ನು ಹಾಸ್ಯಮಾಡಿದರು; ಅವರು ಆತನ ಹತ್ತಿರ ಬಂದು ಹುಳಿ ಮದ್ಯವನ್ನು ತೋರಿಸಿ -


ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ತೆಗೆದುಕೊಳ್ಳಲಿಲ್ಲ.


ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.


ಆಗ ಒಬ್ಬನು ಓಡಿಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು - ಬಿಡಿರಿ, ಎಲೀಯನು ಇವನನ್ನು ಇಳಿಸುವದಕ್ಕೆ ಬರುವನೇನೋ ನೋಡೋಣ ಅಂದನು.


ಆಹಾ, ನಾನು ಈ ಜನರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು