Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:26 - ಕನ್ನಡ ಸತ್ಯವೇದವು J.V. (BSI)

26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:26
10 ತಿಳಿವುಗಳ ಹೋಲಿಕೆ  

ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ;


ಯಾಕಂದರೆ ಅವನು ಪ್ರೀತಿಸುವದನ್ನು ಮರೆತುಬಿಟ್ಟನು. ಬಡವನನ್ನೂ ದೀನನನ್ನೂ ಮನಗುಂದಿದವನನ್ನೂ ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.


ಅವರು ನನ್ನ ದಾರಿಯನ್ನು ಕಡಿದು ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು