Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:36 - ಕನ್ನಡ ಸತ್ಯವೇದವು J.V. (BSI)

36 ಅವರ ಸಂತತಿಗೇ ಅದರ ಹಕ್ಕಿರುವದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವರ ವಂಶಜರೇ ಬಾಧ್ಯಸ್ಥರಾಗುವರದಕೆ I ದೇವರನಾಮ ಪ್ರಿಯರೇ ನಿವಾಸಿಗಳು ಅದಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:36
13 ತಿಳಿವುಗಳ ಹೋಲಿಕೆ  

ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು ಎಂದು ಮೊರೆಯಿಡುತ್ತೇನೆ.


ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.


ನೀತಿವಂತರೋ ದೇಶವನ್ನು ಅನುಭವಿಸುವವರಾಗಿ ಅದರಲ್ಲಿ ಶಾಶ್ವತವಾಗಿ ವಾಸಿಸುವರು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು