Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:8 - ಕನ್ನಡ ಸತ್ಯವೇದವು J.V. (BSI)

8 ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:8
18 ತಿಳಿವುಗಳ ಹೋಲಿಕೆ  

ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ಯಾಕಂದರೆ ಆತನ ಸಹೋದರರು ಸಹ ಆತನನ್ನು ನಂಬದೆ ಇದ್ದರು.


ನನ್ನ ಕಣ್ಣುಗಳೂ ಮೊಬ್ಬಾಗಿಹೋದವು. ನನ್ನ ಆಪ್ತಸ್ನೇಹಿತರು ನನ್ನ ಜಾಡ್ಯವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ದಾವೀದನು ಜನರ ಸಂಗಡ ಹೀಗೆ ಮಾತಾಡುತ್ತಿರುವದನ್ನು ಅವನ ಹಿರೀ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು - ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿ? ನಿನ್ನ ಸೊಕ್ಕೂ ತುಂಟತನವೂ ನನಗೆ ಗೊತ್ತದೆ; ನೀನು ಯುದ್ಧವನ್ನು ನೋಡುವದಕ್ಕೆ ಬಂದಿದ್ದೀ ಎಂದು ಅವನನ್ನು ಗದರಿಸಲು


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವದನ್ನೂ ಜ್ಞಾಪಿಸಿಕೋ.


ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.


ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.


[ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು