Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:14 - ಕನ್ನಡ ಸತ್ಯವೇದವು J.V. (BSI)

14 ನನ್ನ ಶತ್ರುವು ಕೆಡುಕನ್ನು ಹೆರಬೇಕೆಂದು ಪ್ರಸವ ವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ ಶೂನ್ಯವನ್ನೇ ಹೆತ್ತನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:14
6 ತಿಳಿವುಗಳ ಹೋಲಿಕೆ  

ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ಕಲ್ಪಿಸುವದು ಮೋಸವೇ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ; ನಿಮ್ಮ ಬುಸುಗುಟ್ಟುವಿಕೆಯು ನಿಮ್ಮನ್ನೇ ನುಂಗುವ ಜ್ವಾಲೆಯಾಗುವದು.


ಹಿಂಸಕನಿಗೆ ಎಷ್ಟು ವರುಷಗಳು ನೇಮಕವಾಗಿವೆಯೋ ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.


ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು