Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:17
19 ತಿಳಿವುಗಳ ಹೋಲಿಕೆ  

ಪರಾತ್ಪರನೇ, ನಿನ್ನಲ್ಲಿ ನಾನು ಸಂತೋಷಿಸಿ ಉತ್ಸಾಹಪಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.


ಆತನ ಕಾರ್ಯವು ಘನಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವದು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವದು.


ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.


ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.


ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು; ನಿನ್ನ ನೀತಿಯನ್ನು ಹೊಗಳುವರು.


ಯೆಹೋವನೇ, ನಿನ್ನನ್ನು ಕೊಂಡಾಡುವದೂ ಪರಾತ್ಪರನೇ, ನಿನ್ನ ನಾಮವನ್ನು ಸಂಕೀರ್ತಿಸುವದೂ ಯುಕ್ತವಾಗಿದೆ.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು.


ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.


(ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. )


ಅವರ ಮೇಲೆ ಕೆಂಡಗಳು ಸುರಿಯಲಿ; ಅವರು ಅಗ್ನಿಕುಂಡದೊಳಕ್ಕೂ ದೊಡ್ಡ ಮಡುವಿನೊಳಕ್ಕೂ ದೊಬ್ಬಲ್ಪಟ್ಟು ತಿರಿಗಿ ಏಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು