Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:4 - ಕನ್ನಡ ಸತ್ಯವೇದವು J.V. (BSI)

4 ವಿುತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:4
20 ತಿಳಿವುಗಳ ಹೋಲಿಕೆ  

ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರೋಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ಈ ಮಾತುಗಳಿಂದ ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.


ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.


ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಮಂತ್ರಾಲೋಚಕರಲ್ಲೊಬ್ಬನೂ ನಿನ್ನ ಮನೆಯಲ್ಲಿ ಘನವಂತನೂ ಆಗಿದ್ದಾನಲ್ಲವೋ?


ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ -


ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ ಯೋಸೇಫನು ತನ್ನ ಮನೆವಾರ್ತೆಯವನಿಗೆ - ನೀನೆದ್ದು ಆ ಮನುಷ್ಯರನ್ನು ಹಿಂದಟ್ಟಿ ಸಂಧಿಸಿ - ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?


ಆಗ ಸೌಲನು ಅವನಿಗೆ - ನಾನು ಪಾಪಮಾಡಿದೆನು; ದಾವೀದನೇ, ನನ್ನ ಮಗನೇ, ಹಿಂದಿರುಗಿ ಬಾ; ಈಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವದಿಲ್ಲ.


ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ ಅವನು ಮರಣದಂಡನೆಯನ್ನು ಹೊಂದಲಿ; ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ದಾಸರಾಗುವೆವು ಅಂದರು.


ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಸಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ; ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ ಅಂದನು.


ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ


ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ! ತೋಳು ಸಂದಿನಿಂದ ಮುರಿದು ಬೀಳಲಿ.


ಆದರೆ ಪೌಲನು ಮಹಾಶಬ್ದದಿಂದ ಕೂಗಿ ಅವನಿಗೆ - ನೀನೇನೂ ಕೇಡು ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು