ಕೀರ್ತನೆಗಳು 7:9 - ಕನ್ನಡ ಸತ್ಯವೇದವು J.V. (BSI)9 ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ