Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:16 - ಕನ್ನಡ ಸತ್ಯವೇದವು J.V. (BSI)

16 ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ I ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಯೆಹೋವನೇ, ನಿನ್ನ ಘನತೆಯ ಕುರಿತು ಹೇಳುತ್ತಲೇ ಇರುವೆನು. ನಿನ್ನೊಬ್ಬನ ಒಳ್ಳೆಯತನವನ್ನು ಕುರಿತು ಮಾತಾಡುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು. ನಿಮ್ಮ ನೀತಿ ಕೃತ್ಯಗಳನ್ನು ಪ್ರಕಟಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:16
23 ತಿಳಿವುಗಳ ಹೋಲಿಕೆ  

ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವದು.


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಈಗಲಾದರೋ ದೇವರಿಂದ ದೊರಕುವ ನೀತಿಯು ಧರ್ಮಶಾಸ್ತ್ರನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತದೆ.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.


ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವದು ಯಾರಿಂದಾದೀತು?


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು?


ನೀತಿಸ್ಥಾಪಕನಾದ ನೀನು ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ನಿಮ್ಮ ಕೋಟೆಯ ಬಾಗಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರುವವು; ನೀವು ಇರುವವರೆಗೂ ನಿಮಗೆ ಬಲವು ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು