Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:18 - ಕನ್ನಡ ಸತ್ಯವೇದವು J.V. (BSI)

18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:18
16 ತಿಳಿವುಗಳ ಹೋಲಿಕೆ  

ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.


ಯೆಹೋವನ ಘನತೆಯನ್ನೂ ಆತನ ಪರಾಕ್ರಮವನ್ನೂ ಅದ್ಭುತಕೃತ್ಯಗಳನ್ನೂ ಮುಂದಣ ಸಂತತಿಯವರಿಗೆ ವಿವರಿಸುವೆವು.


ಇದರಿಂದ ಅವು ಮುಂದಿನ ತಲೆಯವರಿಗೆ ಗೊತ್ತಾಗಿ ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.


ಅವರು ಬಂದು ಆತನ ನೀತಿಯನ್ನೂ ಆತನು ನಡಿಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಮುದುಕನೂ ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆ ಪೀಠದಿಂದ ಹಿಂದಕ್ಕೆ ಬಾಗಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಪಾಲಿಸಿದನು.


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಏಲಿಯು ತೊಂಭತ್ತೆಂಟು ವರುಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.


ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ - ನಮ್ಮ ಜನವು ಐಗುಪ್ತದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಸುವದಕ್ಕಾಗಿ ಈ ಆಚರಣೆಯನ್ನು ನಡಿಸುತ್ತೇವೆಂಬದಾಗಿ ತಿಳಿಸಬೇಕು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು