Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:2 - ಕನ್ನಡ ಸತ್ಯವೇದವು J.V. (BSI)

2 ನೀತಿಸ್ಥಾಪಕನಾದ ನೀನು ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ನೀತಿವಂತನಾಗಿರುವುದರಿಂದ ನನ್ನನ್ನು ರಕ್ಷಿಸುವೆ; ಬಿಡುಗಡೆಮಾಡುವೆ. ನನಗೆ ಕಿವಿಗೊಟ್ಟು ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ನೀತಿಯಿಂದ ನನ್ನನ್ನು ಬಿಡಿಸಿ, ನನ್ನನ್ನು ಪಾರುಮಾಡಿರಿ. ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ, ನನ್ನನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:2
12 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಮರೆಹೊಕ್ಕಿದ್ದೇನೆ; ನನಗೆ ಎಂದಿಗೂ ಆಶಾಭಂಗಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.


ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.


ಯೆಹೋವನೇ, ನಿನ್ನ ಹೆಸರಿನ ನಿವಿುತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿಸತ್ಯತೆಗಳಿಗನುಸಾರವಾಗಿ ಸದುತ್ತರವನ್ನು ದಯಪಾಲಿಸು.


ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ನಿನ್ನಿಂದ ನನಗೆ ನ್ಯಾಯವಾದ ತೀರ್ಪುಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.


ಕಿವಿಗೊಟ್ಟು ಕೇಳಿ ಬೇಗ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ ದುರ್ಗಸ್ಥಾನವೂ ಆಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು