Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:22 - ಕನ್ನಡ ಸತ್ಯವೇದವು J.V. (BSI)

22 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲ್ಯರ ಸದಮಲಸ್ವಾವಿುಯೇ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು. ನಿಮ್ಮ ನಂಬಿಗಸ್ತಿಕೆಗಾಗಿ ವೀಣೆಯಿಂದ ಕೊಂಡಾಡುವೆನು. ಇಸ್ರಾಯೇಲರ ಪರಿಶುದ್ಧರೇ, ಕಿನ್ನರಿಯಿಂದ ನಿಮ್ಮನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:22
26 ತಿಳಿವುಗಳ ಹೋಲಿಕೆ  

ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ಸಂಕೀರ್ತಿಸಿರಿ.


ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನವನೇ; ಅವನು ಇಸ್ರಾಯೇಲ್ಯರ ಸದಮಲಸ್ವಾವಿುಯ ಸ್ವಕೀಯನು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು; ಹತ್ತು ತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.


ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನಿನ್ನ ಸತ್ಯತೆಯನ್ನು ಮುಂದಣ ಸಂತಾನದವರೆಲ್ಲರಿಗೂ ನನ್ನ ಬಾಯಿ ತಿಳಿಯಮಾಡುವದು.


ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು.


ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಮಾಡುವದೇನು?


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.


ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು