Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:5 - ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೆಹೋವನೇ, ಬಾಲ್ಯಾರಭ್ಯ ನನ್ನ ನಿರೀಕ್ಷೆಯೂ ಭರವಸವೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಒಡೆಯನೇ, ನನ್ನ ಬಾಲ್ಯದಿಂದಲೂ ನೀನೇ ನನ್ನ ನಿರೀಕ್ಷೆಯೂ ಭರವಸವೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾರ್ವಭೌಮ ಯೆಹೋವ ದೇವರೇ, ನೀವು ನನ್ನ ನಿರೀಕ್ಷೆ ಆಗಿದ್ದೀರಿ. ನನ್ನ ಯೌವನದಿಂದ ನನ್ನ ಭರವಸೆಯೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:5
21 ತಿಳಿವುಗಳ ಹೋಲಿಕೆ  

ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು.


ಹೀಗಿರಲಾಗಿ ಕರ್ತನೇ, ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.


ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು; ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.


ನನಗೆ ಭಯಾಸ್ಪದವಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದೀ.


ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು ನಿರೀಕ್ಷಿಸುತ್ತಾ ಇದ್ದೇನೆ; ನಿನ್ನ ಆಜ್ಞೆಗಳನ್ನು ಕೈಕೊಂಡಿದ್ದೇನೆ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.


ಇಸ್ರಾಯೇಲ್ಯರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ದೇಶದಲ್ಲಿ ಪರದೇಶಿಯಂತೆಯೂ ಇಳಿದುಕೊಳ್ಳುವದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೆಯೂ ಇದ್ದೀ?


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ದಯವಿತ್ತು.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು