Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:9 - ಕನ್ನಡ ಸತ್ಯವೇದವು J.V. (BSI)

9 ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ವೃದ್ಧಾಪ್ಯದಲ್ಲಿ ನನ್ನನ್ನು ತಳ್ಳಿಬಿಡಬೇಡ. ಬಲವು ಕುಂದಿ ಹೋಗುತ್ತಿರುವಾಗ ಕೈಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:9
10 ತಿಳಿವುಗಳ ಹೋಲಿಕೆ  

ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ಈಗ ನಾನು ಎಂಭತ್ತು ವರುಷದವನು. ಒಳ್ಳೇದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಸುಮ್ಮನೆ ಯಾಕೆ ಭಾರವಾಗಿರಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು