Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:4 - ಕನ್ನಡ ಸತ್ಯವೇದವು J.V. (BSI)

4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:4
23 ತಿಳಿವುಗಳ ಹೋಲಿಕೆ  

ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ ಅವರನ್ನು ತೂರಿಬಿಡುವನು.


ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವಾಸ್ತ್ಯವನ್ನು ಕುಗ್ಗಿಸಿಬಿಡುತ್ತಾರೆ;


ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.


ಯಾವ ವಿಮರ್ಶೆಯೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.


ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಜಜ್ಜಿದ ದಂಟನ್ನು ಮುರಿದು ಹಾಕದೆ ಕಳೆಗುಂದಿದ ದೀಪವನ್ನು ನಂದಿಸದೆ ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು