Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:9 - ಕನ್ನಡ ಸತ್ಯವೇದವು J.V. (BSI)

9 ಅರಣ್ಯವಾಸಿಗಳು ಅವನಿಗೆ ಅಡ್ಡ ಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:9
12 ತಿಳಿವುಗಳ ಹೋಲಿಕೆ  

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಹಾವಿನಂತೆ ದೂಳನ್ನು ನೆಕ್ಕುವರು; ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು; ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ ಸಮೀಪಿಸಿ ನಿನಗೆ ಭಯಪಡುವರು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣುಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.


ಬಾಲಾತ್, ಅರಣ್ಯಪ್ರದೇಶದಲ್ಲಿರುವ ತಾಮಾರ್, ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು,


ಆಗ ಯೆಹೋವದೇವರು ಸರ್ಪಕ್ಕೆ - ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಮೃಗಗಳಲ್ಲಿಯೂ ಶಾಪಗ್ರಸ್ತವಾದಿ; ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣೇ ತಿನ್ನುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು