Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:12 - ಕನ್ನಡ ಸತ್ಯವೇದವು J.V. (BSI)

12 ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಗರ್ವಿಷ್ಠರು ದುಷ್ಟರೇ ಸರಿ! ಆದರೂ ಅವರ ಐಶ್ವರ್ಯವು ಹೆಚ್ಚಾಗುತ್ತಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದುಷ್ಟರು ನಿಶ್ಚಿಂತರಾಗಿ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:12
11 ತಿಳಿವುಗಳ ಹೋಲಿಕೆ  

ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.


ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.


ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸುರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವದನ್ನು ನೋಡಿದ್ದೆನು.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು