Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:14 - ಕನ್ನಡ ಸತ್ಯವೇದವು J.V. (BSI)

14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ. ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:14
10 ತಿಳಿವುಗಳ ಹೋಲಿಕೆ  

ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;


ಯಾಹುವೇ, ನೀನು ಯಾವನನ್ನು ಶಿಕ್ಷಿಸಿ ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.


ನೀವು ಸದ್ಯಕ್ಕೆ ಸ್ವಲ್ಪಕಾಲ ದೇವರ ಚಿತ್ತಾನುಸಾರ ನಾನಾ ಕಷ್ಟಗಳಲ್ಲಿದ್ದು ದುಃಖಿಸುವವರಾಗಿದ್ದರೂ ಆ ಪದವಿಯನ್ನು ಆಲೋಚಿಸಿ ಹರ್ಷಿಸುವವರಾಗಿದ್ದೀರಿ.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ನನಗೆ ವಿರೋಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವದಲ್ಲಾ.


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?


ದಿನಂಪ್ರತಿಯೂ ಅವನ ಮೇಲೆ ಲಕ್ಷ್ಯವಿಟ್ಟು ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು