Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:17 - ಕನ್ನಡ ಸತ್ಯವೇದವು J.V. (BSI)

17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ದೇವಾಲಯವನು ಹೊಕ್ಕು ನಿಂತಾಗ I ಆ ಜನರ ಅಂತಿಮ ಗತಿಯನಾಲೋಚಿಸಿದಾಗ I ಋಜುವಾದ ಜ್ಞಾನೋದಯ ಆಯಿತೆನಗಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ನಿನ್ನ ಆಲಯಕ್ಕೆ ಹೋದಮೇಲೆ ನನಗೆ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ. ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:17
12 ತಿಳಿವುಗಳ ಹೋಲಿಕೆ  

ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದದ್ದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು.


ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ ಪ್ರಭಾವವನ್ನೂ ಕಂಡ ಪ್ರಕಾರ ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು