Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:2 - ಕನ್ನಡ ಸತ್ಯವೇದವು J.V. (BSI)

2 ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದುರ್ಜನರು ಧನಿಕರಾಗುವುದ ಕಂಡಾಗ I ಗರ್ವಿಗಳ ನೋಡಿ ನಾನಸೂಯೆಗೊಂಡಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ನನ್ನ ಕಾಲುಗಳು ಜಾರಿದವು; ನನ್ನ ಹೆಜ್ಜೆಗಳು ತಪ್ಪಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಪಾದಗಳು ಬಹಳಮಟ್ಟಿಗೆ ತಪ್ಪುವ ಹಾಗಿದ್ದವು. ನನ್ನ ಹೆಜ್ಜೆಗಳು ಜಾರುವುದಕ್ಕೆ ಬಹು ಸಮೀಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:2
15 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು


ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗುವರಲ್ಲಾ ಅಂದುಕೊಂಡೆನು.


ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.


ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.


ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿದ್ದೇನೋ? ನಾನೇಕೆ ಬೇಸರಗೊಳ್ಳಬಾರದು?


ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬದು ನೆಮ್ಮದಿಯಿಂದಿರುವವನ ಯೋಚನೆ;


ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.


ನಾನು ಮಹಾಜನಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು ಎಂದು ಅಂದುಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು