Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:22 - ಕನ್ನಡ ಸತ್ಯವೇದವು J.V. (BSI)

22 ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:22
9 ತಿಳಿವುಗಳ ಹೋಲಿಕೆ  

ಮತ್ತೆ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು - ದೇವರು ಮನುಷ್ಯರನ್ನು ಪರೀಕ್ಷಿಸುವದಕ್ಕೂ ಮನುಷ್ಯರು ಪಶುಪ್ರಾಯರಾಗಿದ್ದೇವೆಂದು ತಾವೇ ಗ್ರಹಿಸಿಕೊಳ್ಳುವದಕ್ಕೂ ಆಸ್ಪದವಾಗುವಂತೆ ಇದು ನರಜನ್ಮದವರ ನಿವಿುತ್ತವಾಗಿ ಆಯಿತಲ್ಲವೆ.


ಪಶುಪ್ರಾಯನು ಅರಿಯನು; ಹುಚ್ಚನು ತಿಳಿಯನು.


ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ! ಮಾನುಷವಿವೇಕವು ನನಗಿಲ್ಲ.


[ಆದದರಿಂದ] ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರುಕಡಿವಾಣಗಳಿಂದಲ್ಲದೆ ಸ್ವಾಧೀನವಾಗುವದಿಲ್ಲವಷ್ಟೆ.


ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.


ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ಹೆಡ್ಡರೋ?


ದುಷ್ಟರು ಹುಲ್ಲಿನಂತೆ ಬೆಳೆಯುವದೂ ಕೆಡುಕರು ಹೂವಿನಂತೆ ಮೆರೆಯುವದೂ ತೀರಾ ಹಾಳಾಗುವದಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು