Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:20 - ಕನ್ನಡ ಸತ್ಯವೇದವು J.V. (BSI)

20 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರಸ್ಥಾನಗಳಲ್ಲಿ ಬಲಾತ್ಕಾರವು ತುಂಬಿ ವಾಸಿಸುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:20
19 ತಿಳಿವುಗಳ ಹೋಲಿಕೆ  

ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವದು.


ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರ ಮಾಡಿದ್ದೀ.


ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು