Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:22 - ಕನ್ನಡ ಸತ್ಯವೇದವು J.V. (BSI)

22 ದೇವರೇ, ಎದ್ದು ನಿನ್ನ ನ್ಯಾಯವನ್ನು ನಡಿಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವದನ್ನು ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ. ದಿನವೆಲ್ಲಾ ಮೂರ್ಖನು ನಿಮ್ಮನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:22
9 ತಿಳಿವುಗಳ ಹೋಲಿಕೆ  

ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯಕೃತ್ಯಗಳನ್ನು ನಡಿಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.


ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚತ್ತು ನನ್ನ ವಿವಾದವನ್ನು ವಿಚಾರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು