Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:4 - ಕನ್ನಡ ಸತ್ಯವೇದವು J.V. (BSI)

4 ನಿನ್ನ ದರ್ಶನಾಲಯಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವೈರಿಗಳಾರ್ಭಟ ನಿನ್ನ ದರ್ಶನಾಲಯದ ಮಧ್ಯೆಯಲಿ I ಅವರ ಜಯ ಬಾವುಟ ಪವಿತ್ರ ಚಿಹ್ನೆಗಳಿಗೆ ಪ್ರತಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ವೈರಿಗಳು ನೀವು ನಮ್ಮನ್ನು ಸಂಧಿಸಿದ ಸ್ಥಳದಲ್ಲಿ ಗರ್ಜಿಸುತ್ತಾರೆ. ತಮ್ಮ ಗುರುತುಗಳನ್ನು ಆರಾಧನಾ ಚಿಹ್ನೆಗಳಾಗಿ ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:4
9 ತಿಳಿವುಗಳ ಹೋಲಿಕೆ  

ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಇಸ್ರಾಯೇಲ್ಯರೆಲ್ಲರೂ ದೇವದರ್ಶನದ ಗುಡಾರದ ಸುತ್ತಲು ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನ ತನ್ನ ಗೋತ್ರಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.


ಅದು ಬಾಯಿತೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ ಆತನ ನಿವಾಸವನ್ನೂ ಪರಲೋಕ ನಿವಾಸಿಗಳನ್ನೂ ದೂಷಿಸಿತು.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ಅದೇ ಸಮಯದಲ್ಲಿ ಕೆಲವರು ಆತನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು