Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:9 - ಕನ್ನಡ ಸತ್ಯವೇದವು J.V. (BSI)

9 ದೇವರು ಲೋಕದ ದೀನರನ್ನು ರಕ್ಷಿಸಿ ನ್ಯಾಯವನ್ನು ಸ್ಥಾಪಿಸುವದಕ್ಕೋಸ್ಕರ ಎದ್ದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:9
12 ತಿಳಿವುಗಳ ಹೋಲಿಕೆ  

ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.


ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡಿಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ ಆರೋನ್ ವಿುರ್ಯಾಮರಿಗೆ - ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕೆಂದು ಆಜ್ಞಾಪಿಸಿದನು.


ಯೆಹೋವನೋ ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು