Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:10 - ಕನ್ನಡ ಸತ್ಯವೇದವು J.V. (BSI)

10 ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?” ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಂತರ ನಾನು ಯೋಚಿಸಿದ್ದೇನಂದರೆ, “ಹೀಗೆ ನೆನಸಿದ್ದು ನನ್ನ ಬಲಹೀನತೆಯೇ. ಮಹೋನ್ನತ ದೇವರ ಬಲಗೈಯ ಪರಾಕ್ರಮದ ವರ್ಷಗಳನ್ನು ನಾನು ಸ್ಮರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:10
12 ತಿಳಿವುಗಳ ಹೋಲಿಕೆ  

ಕೂಡಲೆ ಆ ಹುಡುಗನ ತಂದೆಯು - ನಂಬುತ್ತೇನೆ, ನನಗೆ ನಂಬಿಕೆ ಕಡಿಮೆಯಾಗಿದ್ದರೂ ಸಹಾಯಮಾಡು ಎಂದು ಕೂಗಿ ಹೇಳಿದನು.


ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತಾಡಿದ್ದೇನೆ.


ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.


ಹಳೆಯ ದಿನಗಳನ್ನೂ ಪುರಾತನ ವರುಷಗಳನ್ನೂ ಯೋಚಿಸಿದೆನು.


ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಭರವಸವುಳ್ಳವನಾಗಿಯೇ ಇದ್ದೆನು.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು