Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:20 - ಕನ್ನಡ ಸತ್ಯವೇದವು J.V. (BSI)

20 ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಹೊಡೆದನು ಆಸರೆಯನು, ಚಿಮ್ಮಿತು ನೀರು, ಹರಿಯಿತು ನೆರೆಯು I ಆದರೆ ಕೊಡಬಲ್ಲನೆ ರೊಟ್ಟಿ, ಒದಗಿಸುವನೆ ಮಾಂಸವನು?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:20
7 ತಿಳಿವುಗಳ ಹೋಲಿಕೆ  

ಕೈಯೆತ್ತಿ ತನ್ನ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು; ಸಮೂಹದವರೂ ಅವರ ಪಶುಗಳೂ ಕುಡಿದರು.


ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು.


ಅದಲ್ಲದೆ ಇಸ್ರಾಯೇಲ್ಯರಿಗೆ ಹೀಗೆ ಹೇಳು - ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸಾಹಾರವು ದೊರೆಯುವದು. ನೀವು ಯೆಹೋವನಿಗೆ ಕೇಳಿಸುವಂತೆ - ನಮಗೆ ಮಾಂಸವನ್ನು ಕೊಡುವವರೇ ಇಲ್ಲ ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೆವಲ್ಲಾ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು