Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:22 - ಕನ್ನಡ ಸತ್ಯವೇದವು J.V. (BSI)

22 ಆತನಿಗೆ ಇಸ್ರಾಯೇಲ್ಯರ ಮೇಲೆ ಕೋಪವುಂಟಾಯಿತು; ಯಾಕೋಬ್‍ವಂಶದವರಲ್ಲಿ ಬೆಂಕಿಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:22
10 ತಿಳಿವುಗಳ ಹೋಲಿಕೆ  

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ಇನ್ನೂ ನಂಬಲೇ ಇಲ್ಲ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗಂದರೆ ದೇವರು ತನ್ನ ಮಗನ ವಿಷಯವಾಗಿ ಹೇಳಿರುವ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.


ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು