Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:24 - ಕನ್ನಡ ಸತ್ಯವೇದವು J.V. (BSI)

24 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ ಉಣ್ಣಲಿಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸುರಿಸಿದನು ಅವರ ಮೇಲೆ ಉಣಲು ಅನ್ನವನು I ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಕಾಶದ ದ್ವಾರಗಳು ತೆರೆದು ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:24
10 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ.


ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯಾಹಾರದಿಂದ ಅವರನ್ನು ತೃಪ್ತಿಗೊಳಿಸಿದನು.


ಆ ಮಂಜು ಆರಿಹೋದನಂತರ ಅರಣ್ಯದ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣಸಣ್ಣ ರವೆಗಳು ಕಾಣಿಸಿದವು.


ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ.


ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.


ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಅವರೆಲ್ಲರೂ ದೈವಿಕವಾದ ಒಂದೇ ಆಹಾರವನ್ನು ತಿಂದರು;


ನಾಲ್ಪತ್ತು ವರುಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡಿಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ ಕಾಲಲ್ಲಿದ್ದ ಕೆರವಾಗಲಿ ಜೀರ್ಣವಾಗಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು