ಕೀರ್ತನೆಗಳು 78:38 - ಕನ್ನಡ ಸತ್ಯವೇದವು J.V. (BSI)38 ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ. ಅಧ್ಯಾಯವನ್ನು ನೋಡಿ |