Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:43 - ಕನ್ನಡ ಸತ್ಯವೇದವು J.V. (BSI)

43 ಬಿಡಿಸುವ ಸಮಯದಲ್ಲಿ ಆತನು ಐಗುಪ್ತದಲ್ಲಿ ಮಹತ್ಕಾರ್ಯಗಳನ್ನೂ ಸೋನ್ ಸೀಮೆಯಲ್ಲಿ ಅದ್ಭುತಗಳನ್ನೂ ನಡಿಸಿದ್ದೂ ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಕಡೆಗಣಿಸಿದರು ಈಜಿಪ್ಟಿನಲಿ ಮಾಡಿದ ಪವಾಡಗಳನು I ಸೋನ್ ಬಯಲು ಸೀಮೆಯಲಾತ ಮಾಡಿದ ಮಹತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:43
10 ತಿಳಿವುಗಳ ಹೋಲಿಕೆ  

ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ ಅವನ ಸೇವಕರಿಗೂ ವಿರೋಧವಾಗಿ ಅದ್ಭುತಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದನು.


ಐಗುಪ್ತ್ಯರು ಗರ್ವಿಗಳಾಗಿ ಅವರನ್ನು ಕುಗ್ಗಿಸಿದಾಗ ನೀನು ಫರೋಹನಲ್ಲಿಯೂ ಅವನ ಸೇವಕರಲ್ಲಿಯೂ ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡಿಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿದಿ.


ಆತನು ಐಗುಪ್ತ್ಯರನ್ನೂ ಫರೋಹನನ್ನೂ ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಟವನ್ನು ಹುಟ್ಟಿಸಿ ಐಗುಪ್ತ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ನಡಿಸಿ ನನ್ನ ಶಕ್ತಿಯನ್ನು ತೋರಿಸುವೆನು.


ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.


ಐಗುಪ್ತ ದೇಶದ ಸೋನ್ ಸೀಮೆಯಲ್ಲಿ ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡಿಸಿದನು.


ಮತ್ತು ನಿನ್ನ ಸಂತಾನದವರು ದಾಸರಾಗಿ ಸೇವಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು