ಕೀರ್ತನೆಗಳು 78:55 - ಕನ್ನಡ ಸತ್ಯವೇದವು J.V. (BSI)55 ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.