Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:7 - ಕನ್ನಡ ಸತ್ಯವೇದವು J.V. (BSI)

7 ಆಗ ಅವರು ಮೊಂಡರೂ ಅವಿಧೇಯರೂ ಚಪಲಚಿತ್ತರೂ ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತಾಗದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:7
26 ತಿಳಿವುಗಳ ಹೋಲಿಕೆ  

ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಎಷ್ಟೋ ಮೇಲು; ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವದು.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ದೇವರ ಮೇಲಣ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ. ಆತನ ಆಜ್ಞೆಗಳು ಭಾರವಾದವುಗಳಲ್ಲ.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು.


ಯಾವನು ಅಹಂಕಾರಿಗಳಲ್ಲಿಯೂ ಸುಳ್ಳನ್ನು ಹಿಂಬಾಲಿಸುವವರಲ್ಲಿಯೂ ಸೇರದೆ ಯೆಹೋವನನ್ನೇ ನಂಬುತ್ತಾನೋ ಅವನೇ ಧನ್ಯನು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು.


ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.


ನೀವು ಅವರಿಗೆ - ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದನು;


ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಎಣಿಸಲ್ಪಡುವೆವೆಂಬದಾಗಿ ನೀವು ಉತ್ತರಕೊಡಬೇಕು.


ಅವರು ತನ್ನ ವಿಧಿಗಳನ್ನು ಕೈಕೊಂಡು ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬದೇ ಆತನ ಉದ್ದೇಶ. ಯಾಹುವಿಗೆ ಸ್ತೋತ್ರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು