Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:13 - ಕನ್ನಡ ಸತ್ಯವೇದವು J.V. (BSI)

13 ನಿನ್ನ ಪ್ರಜೆಯೂ ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ ಸದಾ ನಿನ್ನನ್ನು ಸ್ತುತಿಸುವವರಾಗಿ ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿಮ್ಮನ್ನು ಕೊಂಡಾಡಿ, ತಲತಲಾಂತರಕ್ಕೂ ನಿಮ್ಮ ಸ್ತೋತ್ರವನ್ನು ಸಾರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:13
9 ತಿಳಿವುಗಳ ಹೋಲಿಕೆ  

ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು -


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು. ಆತನ ಪ್ರಜೆಯೂ ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಜನರು ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.


ದೇವರೇ, ಎದ್ದು ನಿನ್ನ ನ್ಯಾಯವನ್ನು ನಡಿಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವದನ್ನು ಜ್ಞಾಪಿಸಿಕೋ.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ನಿನ್ನ ಹೆಸರು ಯಾವಾಗಲೂ ಜ್ಞಾಪಕದಲ್ಲಿರುವಂತೆ ನಾನು ಮಾಡುವೆನು; ಆದದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಹೊಗಳುವರು.


ದೇವರೇ ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು