ಕೀರ್ತನೆಗಳು 79:5 - ಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು? ಅಧ್ಯಾಯವನ್ನು ನೋಡಿ |
ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.