ಕೀರ್ತನೆಗಳು 8:2 - ಕನ್ನಡ ಸತ್ಯವೇದವು J.V. (BSI)2 ನಿನಗೆ ವಿರೋಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವದಕ್ಕೋಸ್ಕರ ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.