Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:6 - ಕನ್ನಡ ಸತ್ಯವೇದವು J.V. (BSI)

6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:6
10 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.


ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸ್ಪಷ್ಟವಾಗಿ ಹೇಳಿದನು. ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು; ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವದನ್ನು ನಾವು ಇನ್ನೂ ಕಾಣುವದಿಲ್ಲ.


ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಭೂವಿುಯ ಮೇಲಿರುವ ಎಲ್ಲಾ ಮೃಗಗಳೂ ಆಕಾಶದ ಎಲ್ಲಾ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಗಳೂ ಸಮುದ್ರದ ಮೀನುಗಳೂ ನಿಮಗೆ ಬೆದರಿ ಅಂಜಿಕೊಳ್ಳುವವು; ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು