ಕೀರ್ತನೆಗಳು 80:1 - ಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ. ಅಧ್ಯಾಯವನ್ನು ನೋಡಿ |