Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:16 - ಕನ್ನಡ ಸತ್ಯವೇದವು J.V. (BSI)

16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಬಾಯಿಗದರಿಕೆಯಿಂದ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:16
8 ತಿಳಿವುಗಳ ಹೋಲಿಕೆ  

ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.


ಆ ದಿನದಲ್ಲಿ ಆತನು ತನ್ನ ಪವಿತ್ರರ ಮೂಲಕ ಪ್ರಭಾವ ಹೊಂದುವವನಾಗಿಯೂ ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವವನಾಗಿಯೂ ಬರುವಾಗ ಅಂಥವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ನಿನ್ನ ಕೋಪದಿಂದ ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು