Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:7 - ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:7
10 ತಿಳಿವುಗಳ ಹೋಲಿಕೆ  

ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಸೇನಾಧೀಶ್ವರನಾದ ಯೆಹೋವದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ಇಸ್ರಾಯೇಲ್ಯರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. ಅವನು ಆತನ ಮುಂದೆ ಹೋಗಿ ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ


ಅವರು ಕಣ್ಣಿದ್ದು ನೋಡಿದರೂ ಕಾಣಬಾರದು, ಕಿವಿಯಿದ್ದು ಕೇಳಿದರೂ ತಿಳುಕೊಳ್ಳಬಾರದು, ಹಾಗೆ ಕಂಡು ತಿಳುಕೊಂಡರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದಾರು ಎಂದೇ ಮರೆಮಾಡಲಾಗಿದೆ.


ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು