ಕೀರ್ತನೆಗಳು 81:1 - ಕನ್ನಡ ಸತ್ಯವೇದವು J.V. (BSI)1 ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹ ಧ್ವನಿಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ. ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿ ಗೈಯಿರಿ. ಅಧ್ಯಾಯವನ್ನು ನೋಡಿ |
ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.