Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:14 - ಕನ್ನಡ ಸತ್ಯವೇದವು J.V. (BSI)

14 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ ಅವರ ಶತ್ರುಗಳನ್ನು ಸುಲಭವಾಗಿ ಅಣಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಅಡಗಿಸುತ್ತಿದ್ದೆ ಅವರ ಶತ್ರುಗಳನು ಸುಲಭವಾಗಿ I ಸದೆಬಡಿಯುತ್ತಿದ್ದೆ ಅವರ ವೈರಿಗಳನು ಸರಿಯಾಗಿ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರ ಶತ್ರುಗಳನ್ನು ಸೋಲಿಸುವೆನು; ಇಸ್ರೇಲಿಗೆ ಕೇಡುಮಾಡುವವರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:14
9 ತಿಳಿವುಗಳ ಹೋಲಿಕೆ  

ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣುಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ಇಲ್ಲದಂತಾಗುವಿರಿ.


ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ ಪರಕುಲದವರನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು