Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:2 - ಕನ್ನಡ ಸತ್ಯವೇದವು J.V. (BSI)

2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ ಸ್ವರಮಂಡಲವನ್ನೂ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆರಂಭಿಸಿ ಸಂಗೀತವನು, ಬಾರಿಸಿ ಮೃದಂಗವನು I ನುಡಿಸಿರಿ ಮಧುರ ವೀಣೆಯನು, ಸ್ವರಮಂಡಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ವಾದ್ಯವನ್ನು ನುಡಿಸಲಾರಂಭಿಸಿರಿ; ದಮ್ಮಡಿಯನ್ನು ಬಡಿಯಿರಿ. ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:2
11 ತಿಳಿವುಗಳ ಹೋಲಿಕೆ  

ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ ರಾತ್ರಿಯಲ್ಲಿ ನಿನ್ನ ಸತ್ಯತೆಯನ್ನೂ ವರ್ಣಿಸುವದು ಉಚಿತವಾಗಿದೆ.


ಬಳಿಕ ಅವರು ಕೀರ್ತನೆಹಾಡಿ ಎಣ್ಣೇಮರಗಳ ಗುಡ್ಡಕ್ಕೆ ಹೊರಟುಹೋದರು.


ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು


ನಿಮ್ಮಲ್ಲಿ ಬಾಧೆಪಡುವವನು ಇದ್ದಾನೋ? ಅವನು ದೇವರನ್ನು ಪ್ರಾರ್ಥಿಸಲಿ. ನಿಮ್ಮಲ್ಲಿ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆ ಹಾಡಲಿ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ


[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.


ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು. ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು