Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:8 - ಕನ್ನಡ ಸತ್ಯವೇದವು J.V. (BSI)

8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ. ಇಸ್ರಾಯೇಲ್ಯರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ I ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ. ಇಸ್ರೇಲೇ, ದಯವಿಟ್ಟು ಕಿವಿಗೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಜನರೇ ಕೇಳಿರಿ, ಇಸ್ರಾಯೇಲೇ, ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:8
14 ತಿಳಿವುಗಳ ಹೋಲಿಕೆ  

[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ತಿಳಿದದ್ದನ್ನು ಹೇಳುತ್ತೇವೆ, ನೋಡಿದ್ದಕ್ಕೆ ಸಾಕ್ಷಿಕೊಡುತ್ತೇವೆ; ನೀವು ನಮ್ಮ ಸಾಕ್ಷಿಯನ್ನು ಒಪ್ಪುವದಿಲ್ಲ.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುತ್ತೇವಲ್ಲಾ; ದೇವರ ಸಾಕ್ಷಿಯು ಅದಕ್ಕಿಂತ ವಿಶೇಷವಾಗಿದೆ. ದೇವರು ಕೊಟ್ಟ ಸಾಕ್ಷಿ ಏನಂದರೆ ಆತನು ತನ್ನ ಮಗನ ವಿಷಯದಲ್ಲಿ ಹೇಳಿದ್ದೇ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಮಾತನ್ನು ಕೇಳಿ ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೇದು!


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.


ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಇಸ್ರಾಯೇಲ್ಯರು ಅಲ್ಲಿ ಯೆಹೋವನ ಸಂಗಡ ವಿವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ಮೆರೀಬಾ ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಮಹಾಮಹಿಮೆಯನ್ನು ತೋರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು