Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:9 - ಕನ್ನಡ ಸತ್ಯವೇದವು J.V. (BSI)

9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇರಬಾರದು ಅನ್ಯದೇವತೆಗಳು ನಿಮ್ಮಲಿ I ಪರದೇವತೆಗಳ ಪೂಜೆ ಕೂಡದು ನಿಮ್ಮಲಿ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪರದೇಶದವರು ಆರಾಧಿಸುವ ಯಾವ ಸುಳ್ಳು ದೇವರುಗಳನ್ನೂ ಪೂಜಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮಲ್ಲಿ ಅನ್ಯದೇವರು ಇರಬಾರದು; ಪರದೇವರಿಗೆ ಅಡ್ಡ ಬೀಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:9
12 ತಿಳಿವುಗಳ ಹೋಲಿಕೆ  

ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು;


ಯಾವ ಅನ್ಯದೇವರಾದರೂ ಇಲ್ಲದೆ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದದ್ದೂ;


ಸುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ;


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು