Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:7 - ಕನ್ನಡ ಸತ್ಯವೇದವು J.V. (BSI)

7 ಆದರೂ ನರರಂತೆ ಸತ್ತೇ ಹೋಗುವಿರಿ; ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:7
5 ತಿಳಿವುಗಳ ಹೋಲಿಕೆ  

ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.


ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಿಲ್ಲ; ಪಶುಗಳಂತೆಯೇ ಇಲ್ಲವಾಗುತ್ತಾನೆ.


ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು.


ಓರೇಬ್ ಜೇಬ್ ಎಂಬವರ ಗತಿಯು ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.


ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು