Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:10 - ಕನ್ನಡ ಸತ್ಯವೇದವು J.V. (BSI)

10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:10
10 ತಿಳಿವುಗಳ ಹೋಲಿಕೆ  

ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತಗಳಲ್ಲಿ ಬೇತ್‍ಷೆಯಾನ್, ಇಬ್ಲೆಯಾಮ್, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ಆಕೆಯ ಶವವು ಆ ಹೊಲಕ್ಕೆ ಗೊಬ್ಬರವಾಗುವದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವದು ಎಂಬದಾಗಿ ಯೆಹೋವನು ತಿಷ್ಬೀಯನೂ ತನ್ನ ಸೇವಕನೂ ಆದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು ಅಂದನು.


ಯೆಹೋವನು ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ಬಲಿಕೊಟ್ಟನು. ಸೀಸೆರನು ರಥದಿಂದ ಹಾರಿ ಓಡಿಹೋದನು.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಫರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲಾ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಬಡಕೊಂಡು ಹೋಯಿತು. (ನನ್ನ ಮನವೇ, ಧೈರ್ಯದಿಂದ ಮುಂದೆ ಹೊರಡು.)


ಇದಲ್ಲದೆ ಅವರು ವಿುದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೆಯೂ ಜೇಬನನ್ನು ಜೇಬನ ದ್ರಾಕ್ಷೆಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ವಿುದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು