Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:18 - ಕನ್ನಡ ಸತ್ಯವೇದವು J.V. (BSI)

18 ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:18
21 ತಿಳಿವುಗಳ ಹೋಲಿಕೆ  

ನಾನು ಯೆಹೋವನು; ಅಬ್ರಹಾಮ ಇಸಾಕ ಯಾಕೋಬರಿಗೆ ನಾನು ಸರ್ವಶಕ್ತನಾದ ದೇವರೆಂಬ ಹೆಸರುಳ್ಳವನಾಗಿ ಕಾಣಿಸಿಕೊಂಡೆನೇ ಹೊರತು ಯೆಹೋವನು ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬದು ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.


ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.


ಈ ನಿವಿುತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು ಯೆಹೋವನೆಂದೇ ಅವರಿಗೆ ಗೊತ್ತಾಗುವದು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.


ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು.


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ಪರಾತ್ಪರನೇ, ನಿನ್ನಲ್ಲಿ ನಾನು ಸಂತೋಷಿಸಿ ಉತ್ಸಾಹಪಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಅದಕ್ಕೆ ಅವನು - ಇವು ಸರ್ವಭೂಲೋಕದೊಡೆಯನ ಸನ್ನಿಧಿ ಸೇವಕರೂ ಎಣ್ಣೆಯ ಬುಗ್ಗೆಗಳೂ ಆದ ಇಬ್ಬರು ಪುರುಷರು ಎಂದು ಹೇಳಿದನು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.


ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಯೋಚಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು